ಜೀವಹಾನಿ ತಡೆಯುವ ಸಲುವಾಗಿ ನೈಟ್ ಕರ್ಪ್ಯೂ ಜಾರಿ: ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ - ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ
🎬 Watch Now: Feature Video
ಗದಗ: ಸಾರ್ವಜನಿಕರಿಗೆ ತೊಂದರೆ ಆಗಬಾರದು ಹಾಗೂ ಜೀವ ಹಾನಿ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷದವರು ಸಂಪೂರ್ಣ ಲಾಕ್ ಡೌನ್ ಮಾಡಿದರೆ, ಜನರಿಗೆ ತೊಂದರೆ ಮಾಡುತ್ತಾರೆ ಅಂತಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲೂ ಲಾಕ್ಡೌನ್ ಮಾಡಿದ್ದಾರೆ. ಅಲ್ಲಿ ಯಾವ ಸರ್ಕಾರ ಇದೆ ಎಂದು ಪ್ರಶ್ನಿಸಿದ ಅವರು, ಜನರು ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಗುಂಪು ಸೇರುತ್ತಾರೆ. ಹಾಗಾಗಿ ಒಬ್ಬರಿಂದ ಒಬ್ಬರಿಗೆ ಎರಡನೇಯ ಅಲೆ ವಿಸ್ತರಣೆ ಆಗಬಾರದು ಎಂಬ ಕಾರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಿದೆ ಎಂದರು.