ರಾಜ್ಯ ನೆರೆ ವರದಿ ತಿರಸ್ಕರಿಸಲು ಟಿಕ್ನಿಕಲ್ ಪ್ರಾಬ್ಲಂ ಕಾರಣ: ಸುಮಲತಾ ಅಂಬರೀಶ್ - flood relief fund
🎬 Watch Now: Feature Video
ಮೈಸೂರು:ತಾಂತ್ರಿಕ ಕಾರಣಗಳಿಂದ ಕೇಂದ್ರ ಸರ್ಕಾರ ವರದಿಯನ್ನು ತಿರಸ್ಕಾರ ಮಾಡಿರಬಹುದು. ಆದರೆ ಪರಿಹಾರವನ್ನು ಕೊಡದೇ ಇರಲು ಸಾಧ್ಯವಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮೈಸೂರು ಜಲದರ್ಶಿನಿಯಲ್ಲಿ ಮಾಧ್ಯಮಗಳೊಂದಿಗೆ ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ವರದಿ ತಿರಸ್ಕಾರ ವಿಚಾರದ ಬಗ್ಗೆ ಮಾತನಾಡಿದ ಅವರು, ಸಂಸದರು ಕೇಂದ್ರ ಸರ್ಕಾರವನ್ನ ಪ್ರಶ್ನೆ ಮಾಡುತ್ತಿಲ್ಲ ಅನ್ನುವುದು ಸರಿಯಲ್ಲ. ನಮ್ಮ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದರು.
ಸಂಬಂಧ ಪಟ್ಟ ಅಧಿಕಾರಿಗಳ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದೇನೆ. ನಾನು ಇಲ್ಲಿ ರಾಜಕಾರಣ ಮಾಡುವುದಿಲ್ಲ. ಅದರ ಅವಶ್ಯಕತೆ ನನಗೆ ಇಲ್ಲ.ಇದು ಸಾವಿರಾರು ಕೋಟಿ ಪರಿಹಾರದ ವಿಚಾರ. ಇದರಲ್ಲಿ ಅವ್ಯವಹಾರ ಆಗದಂತೆ ಎಚ್ಚರ ವಹಿಸಬೇಕಾಗಿದೆ. ಅತೀ ಶೀಘ್ರದಲ್ಲೇ ಪರಿಹಾರ ಬಿಡುಗಡೆ ಮಾಡುವ ವಿಶ್ವಾಸವಿದೆ. ಸಂಸದರ ವಿರುದ್ದ ಸುಮ್ಮನೆ ಟೀಕೆ ಮಾಡುವುದು ಸರಿ ಅಲ್ಲ. ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡುವುದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.