ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ... ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ - Raichur news
🎬 Watch Now: Feature Video
ರೈತರ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತರು ಬಿತ್ತನೆ ಮಾಡಿದ ಬೆಳೆಗಳಿಗೆ ನೀರು ಹರಿಸಬೇಕು. ಆದ್ರೆ ಜೆಸ್ಕಾಂ ಇಲಾಖೆಯಿಂದ ಸಮರ್ಕಪವಾಗಿ ಪೂರೈಕೆಯಾಗುತ್ತಿಲ್ಲ. ಪರಿಣಾಮ ರೈತರ ಬೆಳೆಗಳು ಒಣಗಿ ಹಾನಿ ಸಂಭವಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರೈತರ ಪಂಪ್ ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಿ, ನಮ್ಮ ಬೆಳೆಯನ್ನ ಉಳಿಸಿಕೊಳ್ಳಲು ವಿದ್ಯುತ್ ನೀಡಿ ಎಂದು ಪ್ರತಿಭಟನಾನಿರತ ರೈತರು ಮನವಿ ಮಾಡಿದ್ರು.