ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿದ್ದ ವ್ಯಕ್ತಿ ಬಂಧನ - ರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡಿದ್ದ ವ್ಯಕ್ತಿಯ ಬಂಧನ
🎬 Watch Now: Feature Video
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಪಟ್ಟಣದಲ್ಲಿ ಬೇಕಾಬಿಟ್ಟಿಯಾಗಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ವಾಹನವನ್ನು ಸೀಜ್ ಮಾಡಿದ್ದಾರೆ. ಸಾಹಸಮಯವಾಗಿ ಬೈಕ್ ಚಾಲನೆ ಮಾಡುವ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ರೇವಣ್ಣ ಎಂಬಾತ ವೈರಲ್ ಮಾಡಿದ್ದನು. ಬೈಕ್ ಸ್ಟಂಟ್ ಮಾಡಿದ್ದ ವೈರಲ್ ಆಗಿದ್ದ ವಿಡಿಯೋವನ್ನು ಗಮನಿಸಿದ ಹುಳಿಯಾರು ಪೊಲೀಸರು ಬೈಕ್ ಅನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.