ಜೆಡಿಎಸ್ ಜಾತ್ಯತೀತತೆ ಪರೀಕ್ಷಿಸಲು ಹೊರಟವರಿಗೆ ಧರ್ಮೇಗೌಡರ ಸಾವೇ ಉತ್ತರ: ಹೆಚ್‌ಡಿಕೆ ಕಣ್ಣೀರು - HD Kumaraswamy Latest News
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10046817-thumbnail-3x2-net-1.jpg)
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಜೆಪಿ ನಗರದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್‌ನ ಜಾತ್ಯಾತೀತತೆ ಪರೀಕ್ಷೆ ಮಾಡಲಾಯಿತು. ಆದರೆ ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದ್ರೂ ಅವರ ಆತ್ಮಾವಲೋಕನ ಆಗಲಿ. ನನ್ನ ಜೀವನದ ಅತ್ಯಂತ ಮರೆಯಲಾಗದ ದುರಂತ ದಿನ ಇದು ಎಂದು ಧರ್ಮೇಗೌಡ ನಿಧನಕ್ಕೆ ಹೆಚ್‌ಡಿಕೆ ಕಣ್ಣೀರು ಹಾಕಿದರು.