ಶಾಲೆ ಪುನಾರಂಭ: ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಧಾರವಾಡ ಡಿಸಿ
🎬 Watch Now: Feature Video
ಧಾರವಾಡ: ಇಂದಿನಿಂದ ಶಾಲಾ-ಕಾಲೇಜು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಪಕ್ಕದಲ್ಲಿರುವ ಸರ್ಕಾರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪಿಯುಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಡಿಸಿ ನಿತೇಶ್ ಪಾಟೀಲ ಹಾಗೂ ಜಿಪಂ ಸಿಇಒ ಡಾ. ಸುಶೀಲಾ ಬಿ ಅವರು ಹೂವು ನೀಡಿ ಸ್ವಾಗತಿಸಿದರು. ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಜಿಲ್ಲೆಯಲ್ಲಿ 1165 ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯು ಕಾಲೇಜು ಆರಂಭಗೊಂಡಿವೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಶೇ. 35ರಷ್ಟು ವಿದ್ಯಾರ್ಥಿಗಳು ಮೊದಲ ದಿನ ಹಾಜರಾಗಿದ್ದಾರೆ. ಆನ್ಲೈನ್ ಕ್ಲಾಸ್ಗಿಂತ ಆಫ್ಲೈನ್ ಕ್ಲಾಸ್ ಅನುಕೂಲ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಹುಮ್ಮಸ್ಸಿನಿಂದ ಆಗಮಿಸಿದ್ದಾರೆ ಎಂದರು.