ಲ್ಯಾಪ್ಟಾಪ್ ವಿತರಣೆಯಲ್ಲಿ ತಾರತಮ್ಯ: ರಾಣೆಬೆನ್ನೂರಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ - ಲ್ಯಾಪ್ಟಾಪ್ ವಿತರಣೆಯಲ್ಲಿ ತಾರತಮ್ಯ
🎬 Watch Now: Feature Video
ರಾಣೆಬೆನ್ನೂರು: ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದ್ದು, ಅನುದಾನಿತ ಪದವಿ ವಿದ್ಯಾರ್ಥಿಗಳಿಗೆ ನೀಡದೆ ತಾರತಮ್ಯ ಮಾಡುತ್ತಿದೆ ಎಂದು ವಿದ್ಯಾರ್ಥಿನಿಯರು ಮಾನವ ಸರಪಳಿ ರಚಿಸುವ ಮೂಲಕ ಪ್ರತಿಭಟನೆ ನಡೆಸಿದ್ರು. ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ನಗರದ ಹಲಗೇರಿ ವೃತ್ತದ ಬಳಿ ಸೇರಿದ್ದ ಸಾವಿರಾರು ವಿದ್ಯಾರ್ಥಿನಿಯರು ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕೇವಲ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮೂಡಿಸಿದೆ. ಮುಂದಿನ ದಿನಗಳಲ್ಲಿ ಈ ತಾರತಮ್ಯ ಮುಂದುವರೆದರೆ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು. ಸ್ಥಳಕ್ಕಾಗಮಿಸಿದ ತಹಶಿಲ್ದಾರ್ ಹಾಗೂ ಪೊಲೀಸರು ಮನವಿ ಪತ್ರ ಪಡೆದು ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು ಎಂದ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.