ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಜೆಟ್ ಕುರಿತ ಕಾರ್ಯಾಗಾರ - Discussion about Budget from the BJP
🎬 Watch Now: Feature Video
ಶಿವಮೊಗ್ಗ: ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್ 2020-21ಎಂಬ ಕಾರ್ಯಾಗಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಬಜೆಟ್ ಕುರಿತು ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಕಲೆ ಹಾಕಲಾಯಿತು. ಬಜೆಟ್ ಬಳಿಕ ಸಾರ್ವಜನಿಕರ ಅಭಿಪ್ರಾಯಗಳ ಕುರಿತು ಚರ್ಚಿಸಲಾಯಿತು. ಕಾರ್ಯಾಗಾರದಲ್ಲಿ ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್ ಅರುಣ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನು ಪ್ರಕಾಶ್, ವಿಕಾಸ್ ಪುತ್ತೂರು, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.