ಲಕ್ಷ್ಮಣತೀರ್ಥ ನದಿ ಪ್ರವಾಹ ಪೀಡಿತ ಪ್ರದೇಶಕ್ಕೆ ಹೆಚ್.ವಿಶ್ವನಾಥ್ ಭೇಟಿ.. - ಅನರ್ಹ ಶಾಸಕ ಹೆಚ್.ವಿಶ್ವನಾಥ್
🎬 Watch Now: Feature Video
ಮೈಸೂರು:ಲಕ್ಷ್ಮಣತೀರ್ಥ ನದಿಯ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಹುಣಸೂರು ನಗರದ ಹಲವಾರು ಬಡಾವಣೆಗಳು ಜಾಲವೃತಗೊಂಡಿವೆ. ಪ್ರವಾಹದಲ್ಲಿ ಸಿಲುಕಿರುವ ಹಲವು ಜನರನ್ನು ಈಗಾಗಲೇ ಆಗ್ನಿಶಾಮಕ ದಳ ರಕ್ಷಣೆ ಮಾಡಿದ್ದು, ಹಾನಿಗೊಳಗಾದ ಈ ಪ್ರದೇಶಗಳಿಗೆ ಹೆಚ್. ವಿಶ್ವನಾಥ್ ಭೇಟಿ ನೀಡಿ, ಜನರ ಸಂಕಷ್ಟ ವಿಚಾರಿಸಿದರು. ಸರ್ಕಾರದಿಂದ ಎಲ್ಲಾ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಜನರಲ್ಲಿ ಧೈರ್ಯ ತುಂಬಿದರು.