ನೆಲ್ಯಾಡಿ ಗ್ರಾ.ಪಂ, ಸಮಾನ ಮನಸ್ಕ ವೇದಿಕೆಯಿಂದ ನಿರಾಶ್ರಿತರಿಗೆ ಆಹಾರ ಸಾಮಗ್ರಿಗಳ ವಿತರಣೆ - nelyadi mangalore latest news
🎬 Watch Now: Feature Video
ನೆಲ್ಯಾಡಿ ಗ್ರಾಮ ಪಂಚಾಯತ್ ಮತ್ತು ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಸುಮಾರು 200 ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ನೆಲ್ಯಾಡಿ ಗ್ರಾ.ಪಂ. ವಠಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಸಮಾನ ಮನಸ್ಕರ ವೇದಿಕೆ ನೆಲ್ಯಾಡಿ ಪದಾಧಿಕಾರಿಗಳು, ಜೆಸಿಐ ಕಾರ್ಯಕರ್ತರು ಉಪಸ್ಥಿತರಿದ್ದರು. ಇಷ್ಟು ಮಾತ್ರವಲ್ಲದೇ ಧರ್ಮಗುರುಗಳು, ಸ್ಥಳೀಯ ಪ್ರಮುಖರನ್ನು ಒಳಗೊಂಡಿರುವ ಸಮಾನ ಮನಸ್ಕ ವೇದಿಕೆ ನೆಲ್ಯಾಡಿಯ ಕಾರ್ಯಕರ್ತರು ದಿನಂಪ್ರತಿ ನೂರಾರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ನೀಡುತ್ತಿದ್ದಾರೆ. ಜೊತೆಗೆ ನೆಲ್ಯಾಡಿ ಪೇಟೆಯಲ್ಲಿ, ಅಂಗಡಿಗಳಲ್ಲಿ, ತಮ್ಮ-ತಮ್ಮ ಮನೆಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಈ ವೇದಿಕೆ ಮಾಡುತ್ತಿದೆ.