ಮೈಸೂರಿನ ನಿರ್ಗಮಿತ ಡಿಸಿ ಬಿ.ಶರತ್ ಆಸ್ಪತ್ರೆಗೆ ದಾಖಲು - mysore latest news
🎬 Watch Now: Feature Video
ಮೈಸೂರು: ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ಶನಿವಾರ ದಾಖಲಾಗಿದ್ದಾರೆ. 29 ದಿನಗಳ ಕಾಲ ಮೈಸೂರು ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿತ್ತು. ನಂತರ ವರ್ಗಾವಣೆಯನ್ನು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದು, ಇದರ ವಿಚಾರಣೆ ಅಕ್ಟೋಬರ್ 23ಕ್ಕೆ ನಡೆಯಲಿದೆ. ಈ ಎಲ್ಲಾ ಬೆಳವಣಿಗೆಯಿಂದ ಮಾನಸಿಕವಾಗಿ ಅವರು ಕುಂದಿದ್ದು, ಇದೇ ಅನಾರೋಗ್ಯಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಸದ್ಯ ಬಿ.ಶರತ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.