ಮಾಸ್ಕ್ ಧರಿಸದವರಿಗೆ ದಂಡದ ಬಿಸಿ ಮುಟ್ಟಿಸಿದ ಉಡುಪಿ ಜಿಲ್ಲಾಧಿಕಾರಿ - ಮಾಸ್ಕ್ ಧರಿಸದವರಿಗೆ ದಂಡದ ಬಿಸಿ ಮುಟ್ಟಿಸಿದ ಉಡುಪಿ ಜಿಲ್ಲಾಧಿಕಾರಿ
🎬 Watch Now: Feature Video
ಉಡುಪಿ: ನಗರದಲ್ಲಿ ಮಾಸ್ಕ್ ಧರಿಸದೇ ಸಂಚರಿಸುವವರನ್ನು ತಡೆದು ದಂಡ ವಸೂಲಿ ಮಾಡುವ ಮೂಲಕ ಬಿಸಿ ಮುಟ್ಟಿಸಲಾಗುತ್ತಿದೆ. ಕೊರೊನಾ ವೈರಸ್ ನಿಗ್ರಹಕ್ಕೆ ಪಣ ತೊಟ್ಟಿರುವ ಜಿಲ್ಲಾಧಿಕಾರಿ ಜಗದೀಶ್, ಸ್ವತಃ ಫೀಲ್ಡಿಗಿಳಿದು ಕೋವಿಡ್ ಮಾರ್ಗಸೂಚಿ ಪಾಲಿಸದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡುತ್ತಿದ್ದಾರೆ. ಮಾಸ್ಕ್ ಧರಿಸದ ಸಾರ್ವಜನಿಕರಿಗೆ 100 ರೂ. ಹಾಗೂ ಮಾಸ್ಕ್ ಧರಿಸದೆ ವ್ಯಾಪಾರ ನಡೆಸುವ ಅಂಗಡಿ ಮಾಲೀಕರಿಗೆ 5,000 ದಂಡ ವಿಧಿಸಲಾಗುತ್ತಿದೆ.