ತುಮಕೂರಲ್ಲಿ ಯಾವುದೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿಲ್ಲ: ಡಿಸಿ ಸ್ಪಷ್ಟನೆ - ತುಮಕೂರು ಎಸ್​ಎಸ್​ಎಲ್​ಸಿ ಪರೀಕ್ಷೆ ಸಿದ್ಧತೆ

🎬 Watch Now: Feature Video

thumbnail

By

Published : Jun 24, 2020, 5:49 PM IST

ತುಮಕೂರು: ಜಿಲ್ಲೆಯಲ್ಲಿ ಯಾವುದೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿಲ್ಲ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 144 ಪರೀಕ್ಷಾ ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗುತ್ತಿದ್ದು, 23,780 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. 26 ವಿದ್ಯಾರ್ಥಿಗಳು ಕಂಟೈನ್ಮೆಂಟ್​​ ವಲಯದಿಂದ ಪರೀಕ್ಷೆ ಬರೆಯಲು ಬರುತ್ತಿದ್ದಾರೆ. ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅಲ್ಲದೆ ಆಂಧ್ರ ಪ್ರದೇಶದ 23 ವಿದ್ಯಾರ್ಥಿಗಳು ನಮ್ಮ ಜಿಲ್ಲೆಯಲ್ಲಿ ಪರೀಕ್ಷೆ ಬರುತ್ತಿದ್ದಾರೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.