ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ಕಾಂಗ್ರೆಸ್ ಆಗ್ರಹ - ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
🎬 Watch Now: Feature Video
ಶಿವಮೊಗ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಎಲ್ಲಾ ಧರ್ಮೀಯರು ಹೋರಾಡಿದ್ದಾರೆ. ಆದರೆ, ಇಂದು ಅಖಂಡ ಭಾರತವನ್ನು ಒಡೆಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಹೊರಟಿದ್ದಾರೆ. ರಾಜಕೀಯ ದುರುದ್ದೇಶದಿಂದ ವೋಟಿನ ರಾಜಕಾರಣ ಮಾಡಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಹೀಗಾಗಿ, ಕೂಡಲೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೋಳಿಸಬೇಕು ಎಂದು ಒತ್ತಾಯಿಸಿದರು.