ರಂಭಾಪುರಿ ಪೀಠಕ್ಕೆ ಡಿಕೆಶಿ ಭೇಟಿ: ಮಗಳ ಮದುವೆಗೆ ಶ್ರೀಗಳನ್ನು ಆಹ್ವಾನಿಸಿದ ಕೆಪಿಸಿಸಿ ಅಧ್ಯಕ್ಷ - ರಂಭಾಪುರಿ ಶ್ರೀಗಳ ಆಶೀರ್ವಾದ
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರುನಲ್ಲಿರುವ ಶ್ರೀ ರಂಭಾಪುರಿ ಪೀಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಡಿಕೆಶಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದು, ಮಗಳ ಮದುವೆಯ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಆಹ್ವಾನಿಸಿದ್ದಾರೆ. ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದು, ನಂತರ ಗೌರಿಗದ್ದೆಯ ಅವಧೂತ ಶ್ರೀ ವಿನಯ ಗುರೂಜಿಗಳ ಆಶ್ರಮಕ್ಕೆ ಡಿಕೆಶಿ ತೆರಳಿದ್ದು, ಗೌರಿ ಗದ್ದೆಯಲ್ಲಿ ವಿನಯ ಗುರೂಜಿ ಅವರನ್ನು ಬೇಟಿ ಮಾಡಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಅವರಿಗೆ ನೀಡಲಿದ್ದಾರೆ.