ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ: ಬೈಕ್ ಜಾಥಾ, ಕಟೀಲ್ ರೋಡ್ ಶೋ - ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ
🎬 Watch Now: Feature Video
ಕೊಪ್ಪಳ: ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದೊಡ್ಡನಗೌಡ ಪಾಟೀಲ್ ಅವರ ಪದಗ್ರಹಣ ಹಿನ್ನೆಲೆ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ನಗರದ ಗೌರಿಶಂಕರ ದೇವಸ್ಥಾನದ ಬಳಿಯಿಂದ ಬೈಕ್ ಜಾಥಾ ಆರಂಭವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್, ಸಂಸದ ಸಂಗಣ್ಣ ಕರಡಿ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ ಬೈಕ್ ಜಾಥಾಕ್ಕೆ ಸಾಥ್ ನೀಡಿದರು. ಗೌರಿಶಂಕರ ದೇವಸ್ಥಾನದ ಬಳಿಯಿಂದ ಅಶೋಕ ಸರ್ಕಲ್ ಮಾರ್ಗವಾಗಿ ಶ್ರೀ ಶಿವಶಾಂತ ಮಂಗಲ ಭವನದವರೆಗೆ ಜಾಥಾ ಸಾಗಿತು. ಜಾಥಾದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.