ಕೆ.ಆರ್.ಪುರದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಚಾಲನೆ - Ayodhya Ram Mandir Updates
🎬 Watch Now: Feature Video
ಕೆಆರ್ ಪುರ: ಕೆ.ಆರ್. ಪುರ ವಿಧಾನಸಭಾ ಕ್ಷೇತ್ರದ ಎ.ನಾರಾಯಣಪುರ ವಾರ್ಡ್ನಲ್ಲಿ ಶ್ರೀರಾಮನ ರಥಯಾತ್ರೆ ಮಾಡುವ ಮೂಲಕ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಶ್ರೀರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿಲನ್ಯಾಸ ಮಾಡಿದ್ದು, ಇಂದಿನಿಂದ ನಮ್ಮ ಕ್ಷೇತ್ರದ ಪ್ರತಿಯೊಬ್ಬ ಮತದಾರರು ತಮ್ಮ ಕೈಲಾದಷ್ಟು ದೇಣಿಗೆ ನೀಡಬೇಕು ಎಂದು ಮನವಿ ಮಾಡಿದರು.
TAGGED:
Ayodhya Ram Mandir Updates