ಕುಮಟಳ್ಳಿಯಂತೆ ಪಕ್ಷಕ್ಕೆ ದ್ರೋಹ ಬಗೆಯುವುದಾದ್ರೆ ಟಿಕೆಟ್ ಕೇಳಬೇಡಿ: ಕೈ ಮುಖಂಡರಿಂದ ಎಚ್ಚರಿಕೆ
🎬 Watch Now: Feature Video
ಬೆಳಗಾವಿ/ಅಥಣಿ: ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬಳಿಕ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲ ಪಕ್ಷದವರು ಸಭೆ ನಡೆಸಿ ಮುಂದಿನ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಹಾಗೆಯೇ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಬಸವರಾಜ್ ಬುಟಾಳಿ, ಮಹೇಶ್ ಕುಮಟಳ್ಳಿ ತರ ಪಕ್ಷಕ್ಕೆ ದ್ರೋಹ ಬಗೆದು ಹೋಗುವುದಿದ್ದರೆ ದಯವಿಟ್ಟು ಟಿಕೆಟ್ ಕೇಳಬೇಡಿ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಎಚ್ಚರಿಕೆ ನೀಡಿದರು.