ಮ್ಯಾನ್ಹೋಲ್ ತುಂಬಿ ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು: ತಲೆಕೆಡಿಸಿಕೊಳ್ಳದ ಜಲಮಂಡಳಿ - ವೈಟ್ಫೀಲ್ಡ್-ಇಮ್ಮಡಿಹಳ್ಳಿಯ ಮುಖ್ಯರಸ್ತೆ
🎬 Watch Now: Feature Video
ಬೆಂಗಳೂರು/ಮಹದೇವಪುರ: ಕೆಲದಿನಗಳಿಂದ ವೈಟ್ಫೀಲ್ಡ್-ಇಮ್ಮಡಿಹಳ್ಳಿಯ ಮುಖ್ಯರಸ್ತೆಯಲ್ಲಿ ಮ್ಯಾನ್ ಹೋಲ್ ತುಂಬಿ ಮುಖ್ಯರಸ್ತೆಗೆ ಹರಿಯುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಖಾಸಗಿ ಕಂಪನಿಗಳು ಈ ಭಾಗದಲ್ಲಿ ಹೆಚ್ಚಾಗಿರುವುದರಿಂದ ಇಮ್ಮಡಿಹಳ್ಳಿ ಮುಖ್ಯರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೀಗ ಕೊಳಚೆ ನೀರಿನಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಜಲಮಂಡಳಿ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.