ಶುದ್ಧ ಕುಡಿಯುವ ನೀರಿನ ಘಟಕ ಸ್ಫೋಟ... - Drinking water Tank Blast
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4394889-thumbnail-3x2-blast.jpg)
ಶಿರಸಿ: ತಾಂತ್ರಿಕ ದೋಷದಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕದ ಬಾಯ್ಲರ್ನಲ್ಲಿ ಟ್ಯಾಂಕರ್ ಸ್ಫೋಟಗೊಂಡಿದೆ. ಅದೃಷ್ಟಾವಶಾತ್ ಯಾವುದೇ ಅವಘಡಗಳು ಸಂಭವಿಸಿಲ್ಲ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದ ಅರ್ಬನ್ ಬ್ಯಾಂಕ್ ವೃತ್ತದಲ್ಲಿ ನಡೆದಿದೆ. ₹ 10 ಲಕ್ಷ ಅನುದಾನದಲ್ಲಿ ನಿರ್ಮಿಸಿರುವ ಘಟಕ 5000 ಲೀಟರ್ ಸಾಮರ್ಥ್ಯ ಹೊಂದಿದೆ. ಸ್ಫೋಟದಿಂದ ಟ್ಯಾಂಕರ್ ಹಾಗೂ ಕಿಟಕಿ ಗಾಜು ಪುಡಿಪುಡಿಯಾಗಿದ್ದು, ಒಟ್ಟಾರೆ ಲಕ್ಷ ಮೌಲ್ಯದ ಸಾಮಗ್ರಿ ಹಾನಿಯಾಗಿದೆ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಹಾಗೂ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : Sep 10, 2019, 3:28 PM IST