ಮುರುಡೇಶ್ವರದಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಅಭಿಯಾನಕ್ಕೆ ಚಾಲನೆ... - cleaning at nearby murudeshwara beach
🎬 Watch Now: Feature Video

ಭಟ್ಕಳ: ಉತ್ತರಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಮಾವಳ್ಳಿ ಗ್ರಾಮ ಪಂಚಾಯ್ತಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಎಂಬ ವಿಶೇಷ ಆಂದೋಲನದ ಅಂಗವಾಗಿ ಮುರುಡೇಶ್ವರ ಕಡಲತೀರದಲ್ಲಿ ಸ್ವಚ್ಛತೆ ನಡೆಸಲಾಯಿತು. ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಪ್ರಿಯಾಂಗ ಎಂ. ಮತ್ತು ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಜೊತೆಯಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಸಿಇಒ ಪ್ರಿಯಾಂಗ ಎಂ., ಮುರುಡೇಶ್ವರದಲ್ಲಿ ಸ್ವಚ್ಛತೆ ಮತ್ತು ರಸ್ತೆ ನಿರ್ಮಾಣ ಪ್ರಸಕ್ತ ಸಮಸ್ಯೆಯಾಗಿಯೇ ಉಳಿದಿದ್ದು, ರಸ್ತೆಯನ್ನು ಆದಷ್ಟು ಶೀಘ್ರವಾಗಿ ಮುಗಿಸಿಕೊಡುತ್ತೇನೆ ಎಂದು ತಿಳಿಸಿದರು.