ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟ ಆನೆಗಳ ಹಿಂಡು, ರೈತರಲ್ಲಿ ಆತಂಕ - ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮ
🎬 Watch Now: Feature Video
ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದ ಬಳಿ ಆನೆಗಳ ಹಿಂಡು ಬೀಡುಬಿಟ್ಟಿವೆ. ಮೆಕ್ಕೆಜೋಳ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಇವು ನಾಶಪಡಿಸುತ್ತಿವೆ. ಒಂದೇ ಬಾರಿ ಏಳು ಆನೆಗಳು ಕಾಣಿಸಿಕೊಂಡಿರುವುದು ಸುತ್ತಮುತ್ತಲಿನ ರೈತರಲ್ಲಿ ಆತಂಕ ಮೂಡಿಸಿದೆ. ಆನೆಗಳ ಉಪಟಳದ ಬಗ್ಗೆ ಸ್ಥಳೀಯರು ಈಗಾಗಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.