ಧಾರವಾಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ : 9 ಎಕರೆಯಲ್ಲಿನ ಕಬ್ಬು, ಮಾವು ಬೆಂಕಿಗಾಹುತಿ - ಧಾರವಾಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್
🎬 Watch Now: Feature Video
ಧಾರವಾಡ: ಶಾರ್ಟ್ ಸರ್ಕ್ಯೂಟ್ ಸುಮಾರು 9 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, 25 ಮಾವಿನ ಮರಗಳು ಸುಟ್ಟು ಭಸ್ಮಗೊಂಡಿರುವ ಘಟನೆ ದಡ್ಡಿ ಕಮಲಾಪುರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ದಡ್ಡಿ ಕಮಲಾಪುರದ ಅಶೋಕ ಮಾನೆ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬಗಳಿಂದ ತಂತಿಗಳು ಜೋತು ಬಿದ್ದಿದ್ದು, ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ದುರ್ಘಟನೆ ನಡೆದಿದೆ. ಇದರಿಂದ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದ್ದು, ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.