ಸಾರಿಗೆ ಸಂಸ್ಥೆ ನಾಲ್ಕು ನಿಗಮಗಳ ಸಿಬ್ಬಂದಿಯನ್ನ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯ! - raichur latest news
🎬 Watch Now: Feature Video
ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರನ್ನ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್ ಮಂಜುನಾಥ ಒತ್ತಾಯಿಸಿದ್ದಾರೆ. ನಗರದ ಪ್ರತಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕರ್ನಾಟಕ ಸಾರಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಾವಿರಾರರು ನೌಕರರು ಇದರಲ್ಲಿ ಕೆಲಸ ಮಾಡುತ್ತಿದ್ದಾರೆ. ಆರ್‌ಟಿಸಿ ಕಾಯ್ದೆಯಡಿ ನಾಲ್ಕು ನಿಗಮಗಳನ್ನ ಮಾಡಲಾಗಿದೆ. ಆದರೂ ಸರ್ಕಾರ ನಮ್ಮ ಬೇಡಿಕೆಗಳನ್ನ ಈಡೇರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.