ಕರ್ನಾಟಕ ಬಂದ್ ಹಿನ್ನೆಲೆ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಿಷ್ಟು! - ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ
🎬 Watch Now: Feature Video
ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರುದ್ದ ನಾಳೆ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದು, ಕರವೇ ನಾರಾಯಣ ಗೌಡ ಬಣ ಸನ್ನದ್ಧವಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ಬಂದ್ಗೆ ಕರವೇ ನಾರಾಯಣ ಗೌಡ ಬೆಂಬಲದ ಸೂಚನೆ ನೀಡಿದ್ದು, ನಾಳೆ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳ ಡಿಸಿ, ತಹಶಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಾಗೂ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಗಾಂಧಿನಗರ ಕರವೇ ಕಚೇರಿಯಿಂದ ಸಿಎಂ ನಿವಾಸದರೆಗೆ ಪ್ರತಿಭಟನೆ ರ‌್ಯಾಲಿ ನಡೆಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ದ ಕರವೇ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುತ್ತದೆ ಎಂದು ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಇನ್ನು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಜೊತೆ ಈಟಿವಿ ಭಾರತ ಪ್ರತಿನಿಧಿ ನಡೆಸಿದ ಚಿಟ್ ಚಾಟ್ ಇಲ್ಲಿದೆ.