ಈ ಟಿವಿ ಭಾರತ ಇಂಪ್ಯಾಕ್ಟ್: ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ ಕಿಮ್ಸ್ - ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಕೊರತೆ
🎬 Watch Now: Feature Video
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಸಾವಿರಾರು ರೋಗಿಗಳಿಗೆ ಕುಡಿಯುವ ನೀರಿಲ್ಲದೇ ಪರದಾಡುವಂತಾಗಿತ್ತು. ಈ ಕುರಿತು ಈ ಟಿವಿ ಭಾರತ ವಿಶೇಷ ವರದಿ ಪ್ರಕಟಿಸಿದ ಹಿನ್ನೆಲೆ, ಸ್ಪಂದನೆ ಸಿಕ್ಕಿದೆ. ಕಿಮ್ಸ್ ಆಡಳಿತ ಮಂಡಳಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದಾರೆ. ಪ್ರತಿಯೊಂದು ಮಹಡಿಯಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.