ಹಾಸನದ ಅಧಿಕಾರಿಗಳು ಕೆಲ ರಾಜಕಾರಣಿಗಳ ಕೆಳಗೆ ಜೀತ ಪದ್ಧತಿಯಲ್ಲಿಯೇ ಇದ್ದಾರೆ: ಎ ಮಂಜು - ಜಿಲ್ಲಾ ಪಂಚಾಯಿತಿ ಚುನಾವಣೆ ಬಗ್ಗೆ ಎ ಮಂಜು ಪ್ರತಿಕ್ರಿಯೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10738422-thumbnail-3x2-surya.jpg)
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೂ ಜಿಲ್ಲೆಯ ಕೆಲವು ಅಧಿಕಾರಿಗಳು ಇನ್ನು ಕೆಲವು ರಾಜಕಾರಣಿಗಳ ಕೆಳಗೆ ಜೀತ ಪದ್ಧತಿಯಲ್ಲಿಯೇ ಇದ್ದಾರೆ ಎಂದು ಮಾಜಿ ಸಚಿವ ಎ.ಮಂಜು ಗಂಭೀರ ಆರೋಪ ಮಾಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಹಿನ್ನೆಲೆ ಕ್ಷೇತ್ರ ಮರುವಿಂಗಡಣೆಯಾಗುತ್ತಿದ್ದು, ರಾಜಕೀಯದ ಕೆಲವು ನಾಯಕರುಗಳ ಒತ್ತಡಕ್ಕೆ ಮಣಿದು ಜಿಲ್ಲೆಯ ಅಧಿಕಾರಿಗಳು ಕೆಲಸವನ್ನು ಮಾಡುತ್ತಿರುವುದನ್ನು ನೋಡಿದ್ರೆ, ಅಧಿಕಾರಿಗಳು ಇನ್ನೂ ಜೀತ ಪದ್ಧತಿಯಲ್ಲಿ ಇದ್ದಾರೆ ಎಂದು ಭಾಸವಾಗುತ್ತಿದೆ ಎಂದ್ರು.