ನಾಲ್ಕು ಬಾರಿ ಶಾಸಕನಾದವನು ಕಾಡಾ ಅಧ್ಯಕ್ಷನಾಗಲು ಸಾಧ್ಯವಿಲ್ಲ: ರಾಜು ಕಾಗೆ - ಕಾರ್ಯಕರ್ತರ ಬೆಂಬಲ
🎬 Watch Now: Feature Video
ಚಿಕ್ಕೋಡಿ: ನಾಲ್ಕು ಬಾರಿ ಶಾಸಕನಾದವನು ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ (ಕಾಡಾ) ಅಧ್ಯಕ್ಷನಾಗಲು ಸಾಧ್ಯವಿಲ್ಲ. ಪಕ್ಷದಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸಿ, ಇಲ್ಲವಾದರೆ ಬೇರೆ ಪಕ್ಷದಿಂದ ಚುನಾವಣೆಗೆ ನಿಂತುಕೊಳ್ಳಿ. ನಾವು ನಿಮ್ಮ ಬೆಂಬಲಕ್ಕೆ ಇದ್ದೇವೆ ಎಂದು ನಮ್ಮ ಕಾರ್ಯಕರ್ತರು, ಅಭಿಮಾನಿಗಳು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಶ್ರೀಮಂತ ಪಾಟೀಲ್ಗೆ (ಅನರ್ಹ ಶಾಸಕ) ಬೆಂಬಲ ನೀಡುವುದಿಲ್ಲ ಎಂದು ಮಾಜಿ ಶಾಸಕ ಭರಮಗೌಡ (ರಾಜು) ಕಾಗೆ ಅವರು 'ಈಟಿವಿ ಭಾರತ್'ಗೆ ಪ್ರತಿಕ್ರಿಯಿಸಿದ್ದಾರೆ.