ಸಚಿವ ಸುಧಾಕರ್ ಶಾಸಕರ ಶೀಲ ಪರೀಕ್ಷೆ ಮಾಡಲಿ: ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ - ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಹೇಳಿಕೆ
🎬 Watch Now: Feature Video
ತುಮಕೂರು : ಸಚಿವ ಸುಧಾಕರ್ ಶಾಸಕರ ಶೀಲ ಪರೀಕ್ಷೆ ಮಾಡಲಿ ಎಂದು ಬಿಜೆಪಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, 224 ಜನ ಶಾಸಕರನ್ನ ತನಿಖೆ ಮಾಡಬೇಕು ಎಂದು ಸಚಿವ ಸುಧಾಕರ್ ಸಿಎಂಗೆ ಪತ್ರ ಬರೆಯಲಿ. ಅವರು ಆರೋಗ್ಯ ಮಂತ್ರಿ. ಹಾಗಾಗಿ, ಶೀಲ ಪರೀಕ್ಷೆ ಮಾಡುವಂತೆ ಸಿಎಂಗೆ ಪತ್ರ ಬರೆಯಲಿ ಎಂದರು. ಮನುಷ್ಯನ ದೇಹದ ಅಂಗಾಂಗಗಳ ಬಗ್ಗೆ ಆರೋಗ್ಯ ಸಚಿವರಿಗೆ ಅರಿವಿದೆ. ಅವು ಹೇಗೆ ಕೆಲಸ ಮಾಡುತ್ತವೆ ಅನ್ನೋದು ಅವರಿಗೆ ತಿಳಿದಿದೆ. ಹಾಗಾಗಿ, ಅವರೇ ಮುಖ್ಯಮಂತ್ರಿಗೆ ಹೇಳಿ ಪರೀಕ್ಷೆ ಮಾಡಿಸಲಿ ಎಂದರು.