ರಾಯಚೂರಿನಲ್ಲಿ ಕೆಪಿಎಸ್ಸಿ ಎಕ್ಸಾಂ: 7,508 ಅಭ್ಯರ್ಥಿಗಳು ಹಾಜರು - KPSC Exam
🎬 Watch Now: Feature Video
ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೂಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಆಯ್ಕೆ ಪರೀಕ್ಷೆ ಹಿನ್ನೆಲೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದರು. ರಾಯಚೂರು ನಗರ ಸೇರಿದಂತೆ ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿದ್ದು, ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೂಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಆಯ್ಕೆ ಬಯಸಿ 13,041 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದು, ಅದರಲ್ಲಿ 7,508 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 5,533 ಅಭ್ಯರ್ಥಿಗಳು ಗೈರಾಗಿದ್ದಾರೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಸ್ಯಾನಿಟೈಸರ್ ಹಾಕಿ, ಸ್ಕ್ರೀನಿಂಗ್ ಮಾಡಿ ಪ್ರವೇಶ ನೀಡಿದ್ದು, ಪರೀಕ್ಷಾ ಕೊಠಡಿಯಲ್ಲಿಯೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗಿತ್ತು.