ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಕೊಪ್ಪಳದಲ್ಲಿ ಸಂಭ್ರಮಾಚರಣೆ - ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6476014-thumbnail-3x2-lek.jpg)
ಕೊಪ್ಪಳ: ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ನಗರದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ನಗರದ ಅಶೋಕ ಸರ್ಕಲ್ನಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಅತ್ಯಾಚಾರಿಗಳಿಗೆ ಈ ರೀತಿ ಗಲ್ಲು ಶಿಕ್ಷೆ ವಿಧಿಸಬೇಕು. ಇದೊಂದು ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಭಯಾ ಕುಟುಂಬಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಘೋಷಣೆ ಕೂಗಿದರು.