ವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆಯ ಫಲಪೂಜಾ ಮಹೋತ್ಸವ - Fala pooja mahothsav at hampi
🎬 Watch Now: Feature Video
ಹೊಸಪೇಟೆ: ಹಂಪಿಯಲ್ಲಿ ವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆ ಫಲಪೂಜಾ(ನಿಶ್ಚಿತಾರ್ಥ) ಮಹೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಫಲಪೂಜಾ ಮಹೋತ್ಸವದ ನಿಮಿತ್ತ ವಿರೂಪಾಕ್ಷೇಶ್ವರ ವಿಗ್ರಹಕ್ಕೆ ಅಭಿಷೇಕ ಮಾಡಲಾಯಿತು. ಬಳಿಕ ವಿಜಯನಗರ ಅರಸರು ನೀಡಿದ ಸ್ವರ್ಣ ಖಚಿತ ಕಿರೀಟ ಧಾರಣೆ ಮಾಡಲಾಗಿತ್ತು. ವಿರೂಪಾಕ್ಷೇಶ್ವರ ದೇಗುಲದಿಂದ ಉತ್ಸವ ಮೂರ್ತಿಗಳನ್ನು ಕೋದಂಡರಾಮ ದೇವಸ್ಥಾನವರೆಗೆ ಮಂಗಳವಾದ್ಯಗಳೊಂದಿಗೆ ಮೆರವಣಿಗೆಯನ್ನು ಮಾಡಲಾಯಿತು. ನಂತರ ದೇವಸ್ಥಾನದಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಅರ್ಚಕರು ನಿಶ್ಚಿತಾರ್ಥ ಶಾಸ್ತ್ರ ಪೂರೈಸಿದರು. ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಫಲಪೂಜಾ ಕಾರ್ಯಕ್ರಮದಲ್ಲಿ ದೀಪೋತ್ಸವ ನೆರವೇರಿಸಿದರು. ಇನ್ನು ರಾಜ್ಯ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ನಾನಾ ಕಡೆಗಳಿಂದ ಭಕ್ತರು ಆಗಮಿಸಿದ್ದರು.