ವಸತಿ ಶಾಲೆಗಾಗಿ ಜಮೀನು ಸ್ವಾಧೀನ.. ಪೆಟ್ರೋಲ್ ಸುರಿದುಕೊಂಡು ರೈತರಿಂದ ಆತ್ಮಹತ್ಯೆಗೆ ಯತ್ನ.. - Mandya district news
🎬 Watch Now: Feature Video
ಮಂಡ್ಯ: ಉಳುಮೆ ಮಾಡುತ್ತಿದ್ದ ಜಮೀನನ್ನು ಸರ್ಕಾರ ವಶಕ್ಕೆ ಪಡೆಯಲು ಮುಂದಾದ ಹಿನ್ನೆಲೆ ಪೊಲೀಸರ ಎದುರೇ ರೈತರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮದ್ದೂರು ತಾಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಜಮೀನನ್ನು ಸರ್ಕಾರ ವಶ ಪಡಿಸಿಕೊಳ್ಳದಂತೆ ಒತ್ತಾಯಿಸಿ ರೈತರು ಹೋರಾಟ ಮಾಡುತ್ತಿದ್ದು, ಮೊರಾರ್ಜಿ ವಸತಿ ಶಾಲೆಗೆ ಜಮೀನು ಬಿಟ್ಟುಕೊಡಲು ವಿರೋಧ ವ್ಯಕ್ತಪಡಿಸಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಸರ್ಕಾರ ಹಾಗೂ ಶಾಸಕ ಡಿಸಿ ತಮ್ಮಣ್ಣ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
Last Updated : Sep 3, 2019, 9:57 PM IST