ಕರ್ನಾಟಕ ಬಂದ್ ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ: ಮಾರುತಿ ಮಾನ್ಪಡೆ - kalaburagi bundh latest news 2020
🎬 Watch Now: Feature Video

ಕಲಬುರಗಿ: ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಜಾರಿ ವಿರೋಧಿಸಿ ರಾಜ್ಯಾದ್ಯಂತ ಹೋರಾಟಗಳು ನಡೆಯುತ್ತಿವೆ. ಈ ಮಧ್ಯೆ, ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವುದರಿಂದ ಜಿಲ್ಲೆಯಲ್ಲಿ ಎಲ್ಲ ಸಂಘಟನೆಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ವಿವಿಧ ರೈತ ಪರ ಸಂಘಟನೆ, ಕನ್ನಡ ಪರ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ. ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಕರ್ನಾಟಕ ಪ್ರಾಂತ ಸಂಘದ ಉಪಾಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದ್ದಾರೆ.