ಸಂತ್ರಸ್ತರಿಗೆ ಹೆಚ್ಚಿನ ಅನುದಾನ ಬಿಡುಗಡೆಗಾಗಿ ಒತ್ತಾಯಿಸಿ ಭಿಕ್ಷೆ ಬೇಡಿದ ರೈತ ಸಂಘದ ಕಾರ್ಯಕರ್ತರು - Dharavad latest news
🎬 Watch Now: Feature Video
ಧಾರವಾಡ: ನೆರೆ ಸಂತ್ರಸ್ತರಿಗೆ ಹೆಚ್ಚಿನ ಅನುದಾನಕ್ಕೆ ಆಗ್ರಹಿಸಿ ಕೈಯಲ್ಲಿ ತಟ್ಟೆ ಹಿಡಿದು ಭಿಕ್ಷೆ ಬೇಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಧಾರವಾಡದ ಉಳವಿ ಬಸವೇಶ್ವರ ದೇವಸ್ಥಾನ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.