ರಾಯಚೂರು: ಬೆಳೆ ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ರೈತ ಸಂಘದಿಂದ ಮುಖ್ಯಮಂತ್ರಿಗೆ ಮನವಿ - Farmers' Association appeals to CM
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6866185-715-6866185-1587371263094.jpg)
ರಾಯಚೂರು : ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತೆ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ನಗರದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಘದ ಸದಸ್ಯರು, ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದು, ಲಾಕ್ ಡೌನ್ ಪರಿಣಾಮ ಅವುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ, ನಮ್ಮ ಸಮಸ್ಯೆ ಪರಿಹರಿಸಿಕೊಡಬೇಕೆಂದು ಕೇಳಿಕೊಂಡರು.