ನೆರೆ ಹಾನಿಯ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ರಾಮನಗರದಲ್ಲಿ ರೈತರ ಪ್ರತಿಭಟನೆ - ರಾಮನಗರ ರೈತರ ಹೋರಾಟ
🎬 Watch Now: Feature Video
ರಾಮನಗರ : ರಾಜ್ಯದಲ್ಲಿ ನಡೆದ ಭೀಕರ ಪ್ರವಾಹಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಕೊಡದ ಕಾರಣ ರಾಜ್ಯ ರೈತ ಸಂಘದ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿದರು. ನಗರದ ಬೆಂಗಳೂರು-ಮೈಸೂರು ರಾ.ಹೆದ್ದಾರಿಯ ಐಜೂರು ವೃತ್ತದಲ್ಲಿ ರೈತ ಸಂಘದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ಕೊಡದೇ ರೈತರನ್ನ ನಿರ್ಲಕ್ಷ್ಯ ಮಾಡಿವೆ. ಕೂಡಲೇ ಸೂಕ್ತ ಪರಿಹಾರ ಕೊಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಿಂದ ಗೆದ್ದಿರುವ ಬಿಜೆಪಿ ಸಂಸದರು ಹಾಗೂ ಸರ್ಕಾರದ ಜನಪ್ರತಿನಿಧಿಗಳ ಮನೆಮುಂದೆ ಉಗ್ರಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.