ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ - ರಾಯಚೂರು ರೈತರ ಪ್ರತಿಭಟನೆ
🎬 Watch Now: Feature Video
ರಾಯಚೂರು: ಫಸಲ್ ಭೀಮಾ ಯೋಜನೆ ಫಲಾನುಭವಿಗಳಿಗೆ ಪರಿಹಾರ ನೀಡಬೇಕು, ರೈತರಿಗೆ ಬ್ಯಾಂಕ್ ಸಾಲ ನೀಡುವಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು, ತುಂಗಾಭದ್ರಾ ಎಡದಂಡೆ ನಾಲೆಯ ನಿರ್ವಹಣೆ ಬಗ್ಗೆ ಸೂಕ್ತ ಕ್ರಮ ವಹಿಸಬೇಕೆಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸ್ವರಾಜ್ ಇಂಡಿಯಾ ಪಕ್ಷ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.