ಬೆಳೆ ವಿಮೆ ಪಾವತಿಸಿದರೂ ಪರಿಹಾರ ನೀಡದ ಸರ್ಕಾರ: ಅನ್ನದಾತರ ಪ್ರತಿಭಟನೆ - flood in gadaga
🎬 Watch Now: Feature Video
2018-19 ನೇ ಸಾಲಿನ ಬೆಳೆ ವಿಮೆ ಪಾವತಿಸಿದರೂ, ಸರ್ಕಾರ ಈವರೆಗೂ ಬೆಳೆ ವಿಮೆ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಶೀಘ್ರವೇ ಈ ಪರಿಹಾರದ ಹಣ ಬಿಡುಗಡೆ ಮಾಡಬೇಕೆಂದು ಗದಗದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಟಿಪ್ಪು ಸುಲ್ತಾನ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಗೆ ತರೆಳಿದ ರೈತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲೆಯ ರೋಣ ತಾಲೂಕಿನ ಬಹುತೇಕ ರೈತರಿಗೆ ಇನ್ನೂ ಬೆಳೆ ವಿಮೆ ಪರಿಹಾರದ ಮೊತ್ತ ಸಿಕ್ಕಿಲ್ಲ. ಇದರಿಂದಾಗಿ ರೈತರಿಗೆ ಅನ್ಯಾಯವಾಗಿದೆ. ಕಳೆದ ಬಾರಿ ಮಳೆ ಇಲ್ಲದೆ ಈ ಭಾಗದ ರೈತರು ಕಂಗಾಲಾಗಿದ್ದರು. ಆದರೆ ಈ ಬಾರಿ ಅತಿವೃಷ್ಟಿಯಾಗಿ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಅವರಿಗೆ ನ್ಯಾಯ ಸಿಗುವಂತಾಗಲಿ ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು.