ಬೆಳೆ ಪರಿಹಾರಕ್ಕೆ ಆಗ್ರಹಿಸಿ ತಾಳಿಕೋಟೆಯಲ್ಲಿ ರೈತರ ಪ್ರತಿಭಟನೆ, ತಹಶೀಲ್ದಾರ್ ವಿರುದ್ಧ ಆಕ್ರೋಶ - Talikote
🎬 Watch Now: Feature Video
ವಿಜಯಪುರ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ತಾಳಿಕೋಟೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ತಾಲೂಕಿನ ಕೊಣ್ಣೂರ ಹಾಗೂ ಪಡೇಕನೂರ ಗ್ರಾಮದ ನೂರಾರು ರೈತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಮಾಡಿದರು. ವೃತ್ತದ ನಾಲ್ಕು ಕಡೆಗಳಲ್ಲಿ ರಸ್ತೆ ಸಂಚಾರ ಬಂದ್ ಮಾಡಿ, ತಾಳಿಕೋಟಿ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಹಶಿಲ್ದಾರ್ ಕಚೇರಿಯಲ್ಲಿ ಗ್ರಾಮದ ರೈತರು ಘೇರಾವ್ ಹಾಕಿದರು.