ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಂದೆ ಅಳಲು ತೋಡಿಕೊಂಡ ರೈತ ಮಹಿಳೆ - ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
🎬 Watch Now: Feature Video

ಕಳೆದ ಕೆಲ ದಿನಗಳಿಂದ ಬೆಳಗಾವಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನ ತತ್ತರಿಸಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸ್ಥಳ ಪರಿಶೀಲನೆ ನಡೆಸಲು ಹೋದಾಗ ಜಮೀನು ಮನೆ ಕಳೆದುಕೊಂಡ ರೈತ ಮಹಿಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಮೀನಿನಲ್ಲಿ ಬೆಳೆದ ಬೆಳೆ ಕೊಚ್ಚಿಕೊಂಡು ಹೋಗಿದ್ದು, ರೈತ ಮಹಿಳೆ ಕಂಗಾಲಾಗಿದ್ದಾರೆ. ಈ ವೇಳೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಗ್ರಾಮಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ್ದಾರೆ. ಜಿಲ್ಲಾದ್ಯಂತ ಮಳೆ ಮುಂದುವರೆದಿದ್ದು, ಮತ್ತೆ ಮೂರು ದಿನಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.