ಬಾಗಲಕೋಟೆ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ - ಟ್ರ್ಯಾಕ್ಟರ್ ರ‍್ಯಾಲಿ
🎬 Watch Now: Feature Video
ಬಾಗಲಕೋಟೆ: ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜಮಖಂಡಿ ನಗರದಲ್ಲಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಹಶೀಲ್ದಾರ್ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು. ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ರೈತರ ವಿರುದ್ದ ಕೇಂದ್ರ ಸರ್ಕಾರ ಮರಣ ಶಾಸನ ಜಾರಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.