ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ.. ಆಕ್ರೋಶ - ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯ ರೈತ ಸಂಘ ಪ್ರತಿಭಟನೆ
🎬 Watch Now: Feature Video
ಪುತ್ತೂರು: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಅಲ್ಲಿನ ಮಿನಿ ವಿಧಾನಸೌಧದ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳ ಮೂಲಕ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಇದೀಗ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡುವ ಮೂಲಕ ರೈತರ ಶವ ಪೆಟ್ಟಿಗೆಗೆ ಅಂತಿಮ ಮೊಳೆ ಹೊಡೆಯುವ ಕೆಲಸಕ್ಕೆ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ-ಹಸಿರುಸೇನೆಯ ಕಾರ್ಯದರ್ಶಿ ಮನೋಹರ್ ಶೆಟ್ಟಿ ಅವರು ಆರೋಪಿಸಿದರು.