ಆರ್ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬೇಡಿ ಎಂದು ರೈತ ಸಂಘದಿಂದ ಪ್ರತಿಭಟನೆ - Farmers Union protests against signing RCEP deal
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4926621-thumbnail-3x2-tmk.jpg)
ತುಮಕೂರು: ಆರ್ಸಿಇಪಿ ಒಪ್ಪಂದದಿಂದ ಪ್ರತಿ ಸೆಕೆಂಡಿಗೆ ಒಬ್ಬೊಬ್ಬ ರೈತ ಸಾಯುವಂತಹ ಪರಿಸ್ಥಿತಿ ಭಾರತ ದೇಶದಲ್ಲಿ ನಿರ್ಮಾಣವಾಗಲಿದೆ. ಹಾಗಾಗಿ, ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಾಟೇಲ್ ಒತ್ತಾಯಿಸಿದರು. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದದಿಂದ ದೇಶದ ಕೃಷಿ ಮತ್ತು ಆಹಾರ ಕ್ಷೇತ್ರಕ್ಕೆ ತೊಂದರೆಯಾಗಲಿದ್ದು, ಕೇಂದ್ರ ಸರ್ಕಾರ ಈ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
TAGGED:
Tumkur news