ಪೊಲೀಸರಿಗೆ ಧಮ್ಕಿ ಹಾಕಿರುವ ವಿಡಿಯೋ ವೈರಲ್; ಮಾಜಿ ಶಾಸಕನ ವಿರುದ್ಧ ಎಫ್ಐಆರ್ - ಬಾಗಲಕೋಟೆಯ ಇಂದಿನ ಸುದ್ದಿಗಳು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9938054-786-9938054-1608388886067.jpg)
ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ವಿಡಿಯೋ ವೈರಲ್ ಆಗಿದೆ. ತಮ್ಮ ಬೆಂಬಲಿಗರಿಗೆ ನೋಟಿಸ್ ನೀಡಿದ್ದ ಹಿನ್ನೆಲೆ ಪೊಲೀಸ್ ಠಾಣೆಗೆ ಆಗಮಿಸಿದ ಅವರು, ಸಿಪಿಐ ಅಯ್ಯನಗೌಡಗೆ ಏಕವಚನದಿಂದ ಅವಾಜ್ ಹಾಕಿದ್ದಾರೆ ಎನ್ನಲಾದ ವಿಡಿಯೋ ಇದಾಗಿದೆ. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಮಾಜಿ ಶಾಸಕನ ಮೇಲೆ ಎಫ್ಐಆರ್ ದಾಖಲಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಈಗ ಜಿಲ್ಲಾದ್ಯಂತ ಚರ್ಚೆಗೆ ಗ್ರಾಸವಾಗಿದೆ.