ಬೆಂಗಳೂರಿನ ಟೈರ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ - fire in chamarajanagara tire factory
🎬 Watch Now: Feature Video
ಚಾಮರಾಜಪೇಟೆಯ ಟಿಆರ್ ಮಿಲ್ ಬಳಿಯ 5ನೇ ಕ್ರಾಸ್ನ ಟೈರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಧ್ಯರಾತ್ರಿ ಕಾಣಿಸಿಕೊಂಡ ಬೆಂಕಿ ಬಳಿಕ ದೊಡ್ಡದಾಗಿ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ 12 ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Dec 13, 2019, 2:24 PM IST