ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕೊಪ್ಪಳದಲ್ಲಿ ಹೊತ್ತಿ ಉರಿದ ಮೂರು ಅಂಗಡಿಗಳು - ವಿದ್ಯುತ್ ಶಾರ್ಟ್ ಸರ್ಕ್ಯೂಟ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10605914-1005-10605914-1613180002615.jpg)
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಅಂಗಡಿಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಈ ಘಟನೆ ನಡೆದಿದೆ. ನಸುಕಿನಜಾವ ಸುಮಾರು 3.30 ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡು ಬಳಿಕ ಮತ್ತೆರಡು ಅಂಗಡಿಗಳಿಗೂ ವ್ಯಾಪಿಸಿದೆ. ಹಣ್ಣಿನ ಅಂಗಡಿ, ಚಪ್ಪಲಿ ಅಂಗಡಿ ಹಾಗೂ ವಾಚ್ ರಿಪೇರಿ ಅಂಗಡಿ ಬೆಂಕಿಗೆ ಆಹುತಿಯಾಗಿವೆ. ಅಂಗಡಿಗಳಲ್ಲಿದ್ದ ಹಣ್ಣು ಸೇರಿದಂತೆ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.