ಆಕಸ್ಮಿಕವಾಗಿ ತಗುಲಿದ ಬೆಂಕಿ... 200ಕ್ಕೂ ಅಧಿಕ ಸಸಿಗಳು ಬೆಂಕಿಗಾಹುತಿ - ಆಕಸ್ಮಿಕವಾಗಿ ತಗುಲಿದ ಬೆಂಕಿ
🎬 Watch Now: Feature Video
ಮುದ್ದೇಬಿಹಾಳ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳದ ಬಯಲು ಅರಣ್ಯ ಪ್ರದೇಶದಲ್ಲಿ ನೆಟ್ಟಿದ್ದ 200ಕ್ಕೂ ಅಧಿಕ ಸಸಿಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಅರಸನಾಳ ಗ್ರಾಮಕ್ಕೆ ಹೋಗುವ ಎಡಭಾಗದಲ್ಲಿ ಮುಸ್ಲಿಂ ಸಮಾಜದ ಸ್ಮಶಾನವಿದ್ದು, ಇಲ್ಲಿ ಬಯಲು ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ 1500ಕ್ಕೂ ಅಧಿಕ ಸಸಿಗಳನ್ನು ನೆಡಲಾಗಿತ್ತು. ಬಯಲು ಪ್ರದೇಶದಲ್ಲಿ ಬೆಳೆದಿದ್ದ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ವರ್ಷದ ಹಿಂದೆ ನೆಟ್ಟಿದ್ದ ಸಸಿಗಳು ಬೆಂಕಿಗೆ ಆಹುತಿಯಾಗಿವೆ. ಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟು ಬೆಂಕಿ ಹತೋಟಿಗೆ ತರಲಾಗಿದೆ.