ಶಾರ್ಟ್ ಸರ್ಕ್ಯೂಟ್‌ನಿಂದ ಪುಸ್ತಕ ಮಳಿಗೆಗೆ ಬೆಂಕಿ.. ಲಕ್ಷಾಂತರ ರೂ. ಹಾನಿ - ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಗರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪುಸ್ತಕ ಮಳಿಗೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕರುಣಾಕರ್ ಎಂಬುವರಿಗೆ ಸೇರಿದ ವಿನಾಯಕ ಸ್ಟೋರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಸುಟ್ಟಿವೆ. ರಾತ್ರಿಯಿಡೀ ಮಳಿಗೆಯೊಳಗಿದ್ದ ಪುಸ್ತಕಗಳು ಬೆಂಕಿಯಲ್ಲಿ ಹೊತ್ತಿ ಉರಿದಿದ್ದರಿಂದ ಮಾಲೀಕರು ಕಣ್ಣೀರು ಹಾಕಿದ್ದಾರೆ. ಅಗ್ನಿಶಾಮಕ ದಳ, ಸ್ಥಳೀಯರಿಂದ ಬೆಂಕಿ ನಂದಿಸುವ ಯತ್ನ ನಡೆದಿದೆ.