ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಬೆಳೆ - fire breaks out in sugar cane land at Mandya
🎬 Watch Now: Feature Video
ಮಂಡ್ಯ: ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು 2 ಎಕರೆ ಬೆಳೆದು ನಿಂತ ಕಬ್ಬು ಸಂಪೂರ್ಣ ನಾಶವಾದ ಘಟನೆ ಮಳವಳ್ಳಿ ತಾಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ನಡೆದಿದೆ. ಋಷಭೇಂದ್ರ ಎಂಬುವರಿಗೆ ಸೇರಿದ ಎರಡು ಎಕರೆ ಕಬ್ಬು ಬೆಳೆ ನಾಶವಾಗಿದ್ದು, ಕಬ್ಬಿನ ಬೆಳೆ ಜೊತೆ ತೆಂಗಿನ ಸಸಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಚ್ಚಿನ ನಷ್ಟ ತಪ್ಪಿಸಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.